ಹವಾಮಾನಾಧಾರಿತ ರೋಗಗಳ ನಿಯಂತ್ರಣಕ್ಕೆ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸಾಮಾನ್ಯವಾಗಿ ರೋಗ ರುಜಿನಗಳು ಹವಾಮಾನಕ್ಕೆ ಅನುಗುಣವಾಗಿ ಹರಡುತ್ತವೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ವರ್ಷದ ಮೊದಲನೇ ಮಾಸದಿಂದ ಕೊನೆಯ ಮಾಸದವರೆಗೆ ಮುನ್ನೆಚ್ಚರಿಕಾ ಕ್ರಮಗಳು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಲ್ಲಿ ಸಮಾಜವು ಆರೋಗ್ಯಯುಕ್ತವಾಗಿ ಇರಲು ಸಾಧ್ಯ. ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆಗಿಂದಾಗ್ಗೆ ಅರಿವು ಮೂಡಿಸಿದ್ದಲ್ಲಿ ಮಾತ್ರ ಜನರು ರೋಗಮುಕ್ತರಾಗಿರಲು ಸಾಧ್ಯ. ಈ ಬಗ್ಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು […]

ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಸಂಪೂರ್ಣ ಪಾರದರ್ಶಕ: ಜಿಲ್ಲಾಧಿಕಾರಿ ಕೂರ್ಮಾರಾವ್ 

ಉಡುಪಿ: ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್‌ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಮತ್ತು ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಾ ಪರಿನಿರ್ವಾಣ ದಿನ ಆಚರಣೆ

ಉಡುಪಿ: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮಗೆ ಮಂಗಳವಾರ ಮಾಲಾರ್ಪಣೆ ಮಾಡಲಾಯಿತು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್‌ ಹಾಗೂ ವಿವಿಧ ಇಲಾಖೆಗಳ […]

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಮಂಗಳವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್‌ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಗ್ಗೆ […]

ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ: ಸರ್ವಪಕ್ಷ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಉಡುಪಿ: ಸೋಮವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಸರ್ವಪಕ್ಷ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ […]