ಜಿಲ್ಲಾ ಯುವ ಮಂಡಳಿ ಪ್ರಶಸ್ತಿ: ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನ

ಉಡುಪಿ: ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ […]

ನ. 24 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 24 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್. ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ […]

ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪಕ್ಕೆ ಬರುವ ಪ್ರವಾಸಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಮಲ್ಪೆ ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ದೇಶ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ನಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಈಗಾಗಲೇ ರಚಿಸಲಾದ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಧ್ಯಯನ ಮಾಡಿ, ಮಲ್ಪೆ ಬೀಚ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎಸ್.ಓ.ಪಿ ರಚಿಸಿ, ಅದರಂತೆ ಬೀಚ್ ಉಸ್ತುವಾರಿ ವಹಿಸಿಕೊಂಡಿರುವವರು ಮತ್ತು ಜೀವ ರಕ್ಷಕರು ಕಾರ್ಯನಿರ್ವಹಿಸುವುದರ ಮೂಲಕ ಪ್ರವಾಸಿಗರು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ತಮ್ಮ ಪ್ರವಾಸಿ ಕ್ಷಣಗಳನ್ನು ಆನಂದಿಸಲು ವ್ಯವಸ್ಥೆ ಮಾಡಬೇಕು ಜಿಲ್ಲಾಧಿಕಾರಿ […]

ನವೆಂಬರ್‌ 21 ರಿಂದ ಭತ್ತ ಖರೀದಿ ನೋಂದಣಿ ಕೇಂದ್ರ ಆರಂಭ: 7 ಕಡೆಗಳಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪನೆ

ಉಡುಪಿ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ಮಂಗಳವಾರದಂದು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಲಾಯಿತು. ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ನವೆಂಬರ್‌ 21 ರಿಂದ ನೋಂದಣಿ ಕೇಂದ್ರಗಳನ್ನು ತೆರೆದು, ರೈತರ ನೋಂದಣಿಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯವಾಗಿ ಬೆಳೆಯುವ ಭತ್ತದ ತಳಿಗಳಾದ ಕಜೆ,ಜಯ,ಜ್ಯೋತಿ,ಪಂಚಮುಖಿ,ಸಹ್ಯಾದ್ರಿ, ಉಷಾ,ಅಭಿಲಾಷ,ಎಂಓ4 ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿದ್ದು,ಸಾಮಾನ್ಯ ಭತ್ತಕ್ಕೆ ರೂ.2540.00 ದರ ನಿಗದಿಪಡಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ […]

ಸರ್ಕಾರಿ ಕಚೇರಿಯ ಹೊರಗುತ್ತಿಗೆ ನೌಕರರ ಕುಂದುಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಸೇರಿದಂತೆ ಮತ್ತಿತರ ನೌಕರರ ಕುಂದು ಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿ ವರ್ಗದವರ ವೇತನ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೇ ಮಾಡಿಕೊಟ್ಟು ಕಚೇರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದರೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು […]