ಮಣಿಪಾಲ: ಡಾ. ವಿ.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ”

ಮಣಿಪಾಲ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ. ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ. ವಿ.ಎಸ್. ಆಚಾರ್ಯರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸೇರಿ ‘ಕನ್ನಡ ಶಾಲು ಮತ್ತು […]
ರಜತಾದ್ರಿ: ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯು ಅಕ್ಟೋಬರ್ 23 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ: ರಘುಪತಿ ಭಟ್

ಉಡುಪಿ: ಜಗತ್ತಿಗೆ ಮಹಾನ್ ಮಾನವೀಯ ಮೌಲ್ಯಗಳನ್ನುಳ್ಳ ಸಂದೇಶ ಸಾರುವ ರಾಮಾಯಣ ಮಹಾಕಾವ್ಯವನ್ನು ಬರೆದಂತಹ ಮಹರ್ಷಿ ವಾಲ್ಮೀಕಿ ನಿತ್ಯ ಸ್ಮರಣೀಯರು. ಇಚ್ಚಾಶಕ್ತಿ ಮತ್ತು ಕಠಿಣ ಪರಿಶ್ರಮದ ಮೂಲಕ ಅತ್ಯುನ್ನತ ಸಾಧನೆಗಳನ್ನು ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಮಹರ್ಷಿಯೇ ಸಾಕ್ಷಿ. ದರೋಡೆಕೋರನಾಗಿದ್ದ ರತ್ನಾಕರ ಎಂಬ ವ್ಯಕ್ತಿ ನಾರದ ಮಹರ್ಷಿಗಳ ಪ್ರೇರಣೆಯಿಂದ ಕಠಿಣ ತಪಸ್ಸನ್ನಾಚರಿಸಿ, ಮಹರ್ಷಿಯಾಗಿ ರೂಪುಗೊಂಡು ರಾಮಾಯಣದಂತಹ ಮಹಾನ್ ಕಾವ್ಯ ರಚಿಸಿ ಆದಿಕವಿಯಾಗಿದ್ದು, ಅವರ ಈ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಭಾನುವಾರ ಮಣಿಪಾಲ […]
ಅ. 6 ರಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇರ ನೇಮಕಾತಿಗಾಗಿ ದಾಖಲೆಗಳ ಪರಿಶೀಲನೆ

ಉಡುಪಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇರ ನೇಮಕಾತಿಗೆ ಸಂಬಂಧಿಸಿದಂತೆ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು schooleducation.kar.nic.in ನಲ್ಲಿ ಪ್ರಕಟಿಸಲಾಗಿರುತ್ತದೆ. ಸದರಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು, ಮಣಿಪಾಲದ ರಜತಾದ್ರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿನ ಸಮಾಜ ವಿಷಯದ 1 ರಿಂದ 40 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಅಕ್ಟೋಬರ್ 6 ರಂದು ಬೆಳಗ್ಗೆ ಹಾಗೂ 41 ರಿಂದ 100 […]
ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ರಿಂದ ಚಾಲನೆ

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2022 ಅಂಗವಾಗಿ ‘ಪ್ರವಾಸೋದ್ಯಮದ ಪುನರಾವಲೋಕನ’ ಎಂಬ ಸಂದೇಶದೊಂದಿಗೆ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಯಿತು. ಮಂಗಳವಾರದಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಬಳಿ ಆಯೋಜಿಸಲಾದ ಬೈಕ್ ರ‍್ಯಾಲಿಗೆ ಶಾಸಕ ರಘುಪತಿ ಭಟ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ […]