ಗಣೇಶ ಚತುರ್ಥಿ ಆಚರಣೆ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಾಭಾವಿ ಸಭೆ

ಉಡುಪಿ: ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾ ರಾವ್ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ […]
ಆಗಸ್ಟ್ 11ರಂದು ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಶ್ರೀ ಸಾಯಿ ಎಂಟರ್ ಪ್ರೈಸಸ್ ಪ್ರೈ.ಲಿ., ಭಂಡಾರಿ ಪವರ್ ಲೈನ್ಸ್ ಪ್ರೈ.ಲಿ., ಆಕ್ಸಿಸ್ ಬ್ಯಾಂಕ್, ಬಿ.ಎಸ್.ಎಲ್ ಇಂಡಿಯನ್ ಪ್ರೈ.ಲಿ ಮತ್ತು ರಿಲಯನ್ಸ್ ಜಿಯೋ ಪೈ.ಲಿ ಕಂಪನಿಗಳ ವತಿಯಿಂದ ಆಗಸ್ಟ್ 11ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ […]
ಜೂನ್ 12: ರಜತಾದ್ರಿಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯು ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ […]
ಸ್ವಾವಲಂಬನೆ, ಸ್ವ-ಉದ್ಯೋಗವೆ ನಿರುದ್ಯೋಗ ಸಮಸ್ಯೆಗಿರುವ ಪರಿಹಾರ: ಎಸ್. ಅಂಗಾರ

ಉಡುಪಿ: ದೇಶದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಸ್ವ-ಉದ್ಯೋಗದ ಅವಶ್ಯಕತೆ ಇದೆ. ಜನರು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾದಲ್ಲಿ ದೇಶದ ಆರ್ಥಿಕತೆ ಯಶಸ್ಸನ್ನು ಕಾಣುತ್ತದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಸೋಮವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇಲಾಖೆ ಇವರ ಸಹಯೋಗದಲ್ಲಿ ನಡೆದ ಅಮೃತ ಸ್ವ- […]
ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಸದಸ್ಯರ ಆಯ್ಕೆ: ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಠಿಸಲು ಅನುಕೂಲವಾಗುವಂತೆ ಹಾಗೂ ಬಾಲವಿಕಾಸ ಅಕಾಡೆಮಿಯ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಸಾಹಿತ್ಯ, ಯಕ್ಷಗಾನ, ಸಾಂಸ್ಕೃತಿಕ, ಜಾನಪದ, ರಂಗಭೂಮಿ ಅಥವಾ ರಂಗಾಯಣ, ಶಾಸ್ತ್ರೀಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ […]