ಮಹನೀಯರ ತತ್ವಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ

ಉಡುಪಿ: ಸಾಧಕರು, ದಾರ್ಶನಿಕರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ತಿಳಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಭಗೀರಥ ಮಹರ್ಷಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹೇಮರೆಡ್ಡಿ ಮಲ್ಲಮ್ಮ ಅಚಲವಾದ ವಿಶ್ವಾಸ, ತಾಳ್ಮೆಯಿಂದ ತಮ್ಮ ಕುಟುಂಬದವರ ಮನಸ್ಸನ್ನು ಗೆಲ್ಲುವುದರ ಜೊತೆಗೆ ಅವರ ಮನ ಪರಿವರ್ತನೆ ಮಾಡುವುದರೊಂದಿಗೆ ಸಮಾಜದಲ್ಲಿ […]
ಶಂಕರಾಚಾರ್ಯರ ತತ್ವಗಳು ಐಕ್ಯತೆ ಮೂಡಿಸುವಲ್ಲಿ ಸಹಕಾರಿ: ಅಪರ ಜಿಲ್ಲಾಧಿಕಾರಿ ವೀಣಾ

ಉಡುಪಿ: ಸನಾತನ ಹಿಂದೂ ಧರ್ಮದ ಉಳಿವು ಮತ್ತು ಬೆಳವಣಿಗೆಗೆ ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾರ್ವಜನಿಕರಲ್ಲಿ ಭಕ್ತಿಯ ಭಾವನೆ ತುಂಬುವುದರ ಮೂಲಕ ಹಾಗೂ ದೇವಾಲಯಗಳ ಸ್ಥಾಪನೆ ಮೂಲಕ ಹಿಂದೂ ಧರ್ಮದ ಬೆಳವಣಿಗೆಗೆ ಕೊಡುಗೆ ನೀಡಿದ್ದ ಶಂಕರಾಚಾರ್ಯರು, ದೇಶದಾದ್ಯಂತ […]
ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಾಗಾರ

ಉಡುಪಿ: ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ಉದ್ದಿಮೆಗಳ ಅಭಿವೃದ್ಧಿಗಾಗಿ ಉದ್ಯಮಿಯಾಗು ಹಾಗೂ ಉದ್ಯೋಗ ನೀಡು ಕಾರ್ಯಾಗಾರವು ಮೇ 12 ರಂದು ಮಂಗಳೂರು, ಕೊಡಿಯಾಲ್‌ಬೈಲ್‌ನ ಡಾ.ಟಿ.ಎಮ್.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.30 ರವರೆಗೆ ಮಣಿಪಾಲದ ರಜತಾದ್ರಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ವರ್ಚುವಲ್ ವೇದಿಕೆ ಮೂಲಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಾಗಾರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆ, ಮೂಲಸೌಕರ್ಯ, ಹಣಕಾಸು ಸೌಲಭ್ಯ […]
ಮೇ 7 ರಂದು ದಿಶಾ ಸಭೆ

ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಮೇ 7 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜೀವಜಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ವೀರಶೈವ ಲಿಂಗಾಯತ ಸಮಾಜದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 1 ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿರುವ, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ವರಮಾನ 40,000 ರೂ. ಒಳಗಿರುವ ರೈತರು ಯೋಜನೆಯ ಸೌಲಭ್ಯ ಪಡೆಯಲು ಮೇ 10 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnataka.gov.in ಭೇಟಿ […]