ಭಾರತೀಯ ಅಂಚೆ ಇಲಾಖೆ: ಸಹೋದರರಿಗೆ ಹಾಗೂ ಸೇನಾ ಯೋಧರಿಗೆ ಆನ್ ಲೈನ್ ರಾಖಿ ತಲುಪಿಸುವ ಅವಕಾಶ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ಮನೆಯಲ್ಲಿ ಕುಳಿತು ದೇಶದ ಯಾವುದೇ ಪ್ರದೇಶಕ್ಕೆ ರಾಖಿಯನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಕೇವಲ 120 ರೂ. ವೆಚ್ಚದಲ್ಲಿ ಸಹೋದರರಿಗೆ ಹಾಗೂ ಲಡಾಕ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಈ ಸೇವಾ ಯೋಜನೆಯಲ್ಲಿ www.karnatakapost.gov.in/Rakhi_Post ಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಿದಾಗ ಏಳು ವಿಧದ ಆಕರ್ಷಕ ವಿನ್ಯಾಸವುಳ್ಳ ರಾಖಿಗಳನ್ನು ವೀಕ್ಷಿಸಬಹುದಾಗಿದ್ದು, ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸ ಅಂಕಿ ನಮೂದಿಸಿದ್ದು […]