ರಕ್ಷಾ ಸಾವಿನ ಪ್ರಕರಣ: ತಪ್ಪಿತಸ್ಥ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ವೀಣಾ ಶೆಟ್ಟಿ ಆಗ್ರಹ
ಉಡುಪಿ: ಇಂದಿರಾನಗರ ನಿವಾಸಿ ರಕ್ಷಾ ಸಂಶಯಾಸ್ಪದ ಸಾವಿನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ತಪ್ಪಿತಸ್ಥ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಒತ್ತಾಯಿಸಿದ್ದಾರೆ.