ರಕ್ಷಿತ್ – ರಿಷಬ್ ಗೆ : ಟ್ರೆಂಡಿಂಗ್‍ ಆಯಕ್ಟರ್, ಐಕಾನಿಕ್ ಡೈರೆಕ್ಟರ್‌ ಪ್ರಶಸ್ತಿ

6ನೇ ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ವಿಶೇಷ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾದ ರಕ್ಷಿತ್‍ ಶೆಟ್ಟಿ ‘ಟ್ರೆಂಡಿಂಗ್‍ ಆಯಕ್ಟರ್’ ಆಗಿದ್ದಾರೆ. ಸ್ಯಾಂಡಲ್​ವುಡ್​ನ ಇಬ್ಬರು ಸೂಪರ್​ಸ್ಟಾರ್ಸ್ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿದ್ದು ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ. 6ನೇ ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಇನ್ನೋವೇಟೀವ್‍ ಫಿಲಂ ಅಕಾಡೆಮಿ, ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ ಪ್ರಸಾದ್‍, ಮಾರತ್‍ಹಳ್ಳಿಯ ಇನ್ನೋವೇಟೀವ್‍ […]