ಆಗಸ್ಟ್ ತಿಂಗಳಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ: ಪ್ರಧಾನಿ ಮೋದಿಗೆ ಆಹ್ವಾನ  

ಅಯೋಧ್ಯೆ: ಇಲ್ಲಿನ ರಾಮ ಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಆಗಸ್ಟ್ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮೂಲಗಳಿಂದ ತಿಳಿದುಬಂದಿದೆ. ರಾಮನ ದೇವಾಲಯ ನಿರ್ಮಾಣಕ್ಕೆ ಸಂಬಂಧಿಸಿ ಶನಿವಾರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಭೆ ನಡೆಯಲಿದ್ದು, ಭೂಮಿ ಪೂಜೆ ನೆರವೇರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಟ್ರಸ್ಟ್ ಮುಖ್ಯಸ್ಥರು ಹೇಳಿದ್ದಾರೆ. ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಈಗಾಗಲೇ ಪ್ರಧಾನ […]