ಪೇಜಾವರ ವಿಶ್ವಪ್ರಸನ್ನ ಶ್ರೀಪಾದರ ಮೂಲಕ ರಾಮಮಂದಿರಕ್ಕೆ ಅಂಜನಾದ್ರಿ ಬೆಟ್ಟದ ಶಿಲೆ ರವಾನೆ
ಉಡುಪಿ: ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ರಾಮಮಂದಿರಕ್ಕೆ ಭೂಮಿಪೂಜೆ ನೆರವೇರಲಿದ್ದು, ಈ ಪವಿತ್ರ ಶುಭಕಾರ್ಯದಲ್ಲಿ ದೇಶದ ವಿವಿಧ ಧಾರ್ಮಿಕ ಕ್ಷೇತ್ರಗಳ ಮಣ್ಣು ಹಾಗೂ ನೀರನ್ನು ಸಂಗ್ರಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶಿಲೆಯನ್ನು ಮೆರವಣಿಗೆಯ ಮೂಲಕ ತಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರ ಮಾಡಿದೆ. ನೀಲಾವರದ ಗೋಶಾಲೆಯಲ್ಲಿ ಇರುವ ಪೇಜಾವರ ಮಠದ ಶಾಖಾ ಮಠದಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿಲೆಯನ್ನು ಪೇಜಾವರ ಶ್ರೀಪಾದರಿಗೆ ಹಸ್ತಾಂತರ ಮಾಡಲಾಯಿತು. ಬಳಿಕ ಮಾತನಾಡಿದ ಶ್ರೀಪಾದರು, […]