ಜ. 22 ರಂದು ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ರಾಮನಾಮ ತಾರಕ ಮಂತ್ರ ಹೋಮ; ಸಾಂಸ್ಕೃತಿಕ ಕಾರ್ಯಕ್ರಮ
ಉಡುಪಿ: ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಜ. 22 ಸೋಮವಾರದಂದು ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ಸಂಭ್ರಮಾಚರಣೆಯ ಪರ್ವಕಾಲದಲ್ಲಿ ಬೆಳಗ್ಗೆ ರಾಮನಾಮ ತಾರಕ ಮಂತ್ರ ಹೋಮವು ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಇವರ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿರುವುದು. ಸಂಜೆ 4 ರಿಂದ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಹೆಸರಾಂತ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳು ಡಾಕ್ಟರ್ ಅರವಿಂದ ಹೆಬ್ಬಾರ್ ಅವರ ನೇತೃತ್ವದಲ್ಲಿ ನೆರವೇರಲಿದೆ. ಸಂಜೆ […]