ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ನೇಮಕ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್‌ ಹೈಕಮಾಂಡ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ರಾಮಲಿಂಗಾ ರೆಡ್ಡಿ ಹಾಗೂ ಧ್ರುವನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.