ಕೊನೆಗೂ ಸೆರೆ : ರಾಮನಗರದಲ್ಲಿ ಇಬ್ಬರು ರೈತರ ಬಲಿ ಪಡೆದ ಒಂಟಿ ಸಲಗ

ರಾಮನಗರ : ರಾಮನಗರದಲ್ಲಿ ರೈತರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲವು ದಿನಗಳಿಂದ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಚನ್ನಪಟ್ಟಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು. ನಾಲ್ಕು ದಿನಗಳ ಹಿಂದೆ ಕಾರ್ಯಾಚರಣೆಗೆ ಆಗಮಿಸಿದ್ದ ಅಭಿಮನ್ಯು ನೇತೃತ್ವದ ಐದು ಸಾಕಾನೆಗಳ ತಂಡ ಶೋಧ ಕೈಗೊಂಡಿತ್ತು. ಈ ಕಾರ್ಯಾಚರಣೆಯ ವೇಳೆ ತಪ್ಪಿಸಿಕೊಂಡಿದ್ದ ಸಲಗವನ್ನು ಇದೀಗ ತೆಂಗಿನಕಲ್ಲು ಅರಣ್ಯ ಪ್ರದೇಶದ ಅರಳಾಳುಸಂದ್ರ ಕಾಡನಕುಪ್ಪೆ ಗ್ರಾಮದಲ್ಲಿ ಸೆರೆ […]