ನಿತ್ಯಾನಂದ ಸ್ವಾಮೀಜಿಯ ಇಬ್ಬರು ಅನುಯಾಯಿಗಳಿಗೆ ಜಾಮೀನು ರಹಿತ ವಾರಂಟ್ ಜಾರಿ ಆದೇಶ
ರಾಮನಗರ: ಬಿಡದಿಯ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಅನುಯಾಯಿಗಳಿಗೆ ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ನೀಡಿದೆ. ಈ ಪ್ರಕರಣದ 3ನೇ ಆರೋಪಿಯಾದ ಶಿವವಲ್ಲಬನೇನಿ ಹಾಗೂ 6ನೇ ಆರೋಪಿ ಜಮುನಾರಾಣಿ ಇಬ್ಬರಿಗೂ ಜಾಮೀನು ರಹಿತ ವಾರಂಟ್ ಜಾರಿ ಮಾಡಲು ನ್ಯಾಯಾಲಯ ಬುಧವಾರ ಆದೇಶಿಸಿದೆ. ಭಾರಿ ವಿವಾದಕ್ಕೆ ಕಾರಣವಾಗಿದ್ದ ಬಿಡದಿಯ ನಿತ್ಯಾನಂದ ಸ್ವಾಮೀಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಬ್ಬರ ಅನುಯಾಯಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ […]