ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್: ರಮಾನಾಥ ರೈ

ಬಂಟ್ವಾಳ: ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ ಎಂದು ರಮಾನಾಥ್ ರೈ ಹೇಳಿದ್ದಾರೆ. ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ […]

ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಇಂದಿರಾ ಸೇವಾ ಕೇಂದ್ರ ಪ್ರಾರಂಭ

ಬಂಟ್ವಾಳ: ಕರ್ನಾಟಕ ಸರ್ಕಾರ ಘೋಷಿಸಿದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಶಿವಪ್ರಸಾದ್ ಕನಪಾಡಿ ಅಧ್ಯಕ್ಷರು ವಲಯ ಕಾಂಗ್ರೆಸ್ ಕಳ್ಳಿಗೆ,ಮನೋಜ್ ಕನಪಾಡಿ ಪ್ರಧಾನ ಕಾರ್ಯದರ್ಶಿ ವಲಯ ಕಾಂಗ್ರೆಸ್ ಕಳ್ಳಿಗೆ, ರೋಷನ್ ರೈ ಅಧ್ಯಕ್ಷರು ಅಸಂಘಟಿತ ಕಾರ್ಮಿಕರ ಘಟಕ, ದಿವಾಕರ್ ಪಂಬದ ಬೆಟ್ಟು ಮಾಜಿ ಎಪಿಎಂಸಿ ಸದಸ್ಯರು,ಶ್ರೀಮತಿ ರತ್ನ ಪಂಚಾಯತ್ ಸದಸ್ಯರು,ಭಾಗೀರಥಿ ಪಂಚಾಯತ್ ಸದಸ್ಯರು, ಶ್ರೀಮತಿ […]

ಕಾಂಗ್ರೆಸ್ ನಿಂದ ಸಮಾಜ ಬಲಿಷ್ಠಗೊಳಿಸುವ ಕಾರ್ಯ: ರಮಾನಾಥ್ ರೈ

ಬಂಟ್ವಾಳ: ಬಡವರಿಗಾಗಿ ಹಲವಾರು ಯೋಜನೆಗಳನ್ನು ತಂದು ಸಮಾಜವನ್ನು ಬಲಿಷ್ಠವಾಗಿರಿಸುವ ಕಾರ್ಯವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಶ್ರೀಮಂತರ ಪರವಾಗಿರುವ ಕೇಂದ್ರ ಸರಕಾರ ಬಡವರ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಬಡವರಿಗೆ ಅನುಕೂಲವಾಗುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ ಹೆಮ್ಮೆ ನಮ್ಮಲ್ಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದರು. ಅವರು ಬಿ.ಸಿ.ರೋಡಿನಲ್ಲಿ ನಡೆದ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕರ್ನಾಟಕ ರಾಜ್ಯ ಸರಕಾರದ ಮಹತ್ತರ ಯೋಜನೆಯಾದ ಶಕ್ತಿ […]

ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತದಾನ ಮಾಡಿದ ರಮನಾಥ ರೈ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಬುಧವಾರ ತಮ್ಮ ಮತ ಕ್ಷೇತ್ರದಲ್ಲಿ ಮತ ಚಲಾಯಿಸುವ ಮುನ್ನ ಬಂಟ್ವಾಳ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬಂಟ್ವಾಳದ ಸಮಗ್ರ ಅಭಿವೃದ್ದಿಗಾಗಿ ರಮಾನಾಥ್ ರೈ ಅವರನ್ನು ಗೆಲ್ಲಿಸೋಣ: ಜಯಂತಿ ಪೂಜಾರಿ

ಬಂಟ್ವಾಳ: ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಘೋಷಿಸಿದ್ದು, ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗುವಂತೆ ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದರು. ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದೆ. ಬೆಲೆ ಏರಿಕೆ ಗಗನಕ್ಕೇರಿರುವ ಇಂತಹ ಸಂದರ್ಭದಲ್ಲಿ ಮನೆ ನಿರ್ವಹಿಸಲು ಮಹಿಳೆಯರಿಗೆ ಅನುಕೂಲವಾಗುವಂತಹ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. […]