ನನ್ನ ಆಡಳಿತಾವಧಿಯಲ್ಲಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭಿವೃದ್ದಿ ಕಾರ್ಯ: ರಮಾನಾಥ ರೈ

ಬಂಟ್ವಾಳ : ಸಚಿವನಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ 5000 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಬಂಟ್ವಾಳದಲ್ಲಿ ಏನಾದರೂ ಸರಕಾರಿ ಯೋಜನೆಗಳು ಕಾರ್ಯಗತವಾಗಿದ್ದರೆ ಅದು ನನ್ನ ಅವಧಿಯಲ್ಲಿ ಜಾರಿಯಾಗಿರುವಂತದ್ದು. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನ್ನ ಅವಧಿಯಲ್ಲಾಗಿದ್ದರೂ, ಅಪಪ್ರಚಾರದಿಂದ ನನ್ನನ್ನು ಸೋಲಿಸಲಾಗಿದೆ. ಸೋತ ಬಗ್ಗೆ ಬೇಸರವಿಲ್ಲ, ಅಪಪ್ರಚಾರ, ಸುಳ್ಳು, ವದಂತಿಗಳನ್ನು ಹರಡುವ ಮೂಲಕ, ವೈಯಕ್ತಿಕ ತೇಜೋವಧೆಯ ಮೂಲಕ ಸೋಲಿಸಿದ ವಿಧಾನದ ಬಗ್ಗೆ ನನಗೆ ಬೇಸರವಿದೆ. ಬಿಜೆಪಿಯ ಇಂತಹ ಕೃತ್ಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗಮನವಿಟ್ಟು ಕೆಲಸ […]

ಬಂಟ್ವಾಳ: ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಹಿರಿಯ ನಾಯಕನ ಆರೋಗ್ಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಇಂದು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ […]

ಬಂಟ್ವಾಳ: ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ

ಬಂಟ್ವಾಳ : ಸಾಮಾಜಿಕ ಬದ್ಧತೆಯ ಸೈದ್ಧಾಂತಿಕ ರಾಜಕಾರಣ ಮಾಡಿಕೊಂಡು ಬಂದವನು ನಾನು. ಯಾವುದೇ ಧರ್ಮ, ಜಾತಿ ತಾರತಮ್ಯ ಮಾಡದೆ ಎಲ್ಲಾ ವರ್ಗಗಳನ್ನು ಸಮಾನತೆಯಿಂದ ನೋಡಿದವನು. ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಜನಸೇವೆ ಮಾಡುತ್ತೇನೆ ಎಂದು ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ತಮ್ಮ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಪಂಪ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ರಮಾನಾಥ […]

ಪ್ರಚೋದನಕಾರಿ ಭಾಷಣಗಳು ಅಮಾಯಕರ ಕೊಲೆಗೆ ಕಾರಣ: ರಮಾನಾಥ್ ರೈ

ಮಂಗಳೂರು: ಪ್ರಚೋದನಕಾರಿ ಭಾಷಣಗಳಿಂದ ಅಮಾಯಕರ ಕೊಲೆಗಳು ನಡೆದಿವೆ, ಇದರಿಂದ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದವರು ಗಲಭೆಗಳ ಹಿಂದೆ ಇರುತ್ತಾರೆ. ಇಂತಹ ಪ್ರಕರಣ ನಡೆದಾಗ ಅಮಾಯಕರು ಬಲಿಯಾಗುತ್ತಾರೆ. ಹಣ ಹಾಗೂ ಅಧಿಕಾರಕ್ಕಾಗಿ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಸಾಧ್ಯ. ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಸರಕಾರ ನಿರ್ಲಕ್ಯ ವಹಿಸಿರುವುದು ಖಂಡನೀಯ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗು ಇಬ್ಬರ ಕುಟುಂಬಕ್ಕೂ ಯಾವುದೇ ತಾರತಮ್ಯ ಮಾಡದೆ […]