ಬಡ ಮೀನುಗಾರರ ರಕ್ಷಣೆ ಮಾಡಲು ರಮೇಶ್ ಕಾಂಚನ್ ಮನವಿ

ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುವುದರೊಂದಿಗೆ ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ. ಬಡ ಮೀನುಗಾರರ ಮೇಲೆ ವಿವಿಧ ರೀತಿಯಲ್ಲಿ ಹಲ್ಲೆಗಳು ಆಗುತ್ತಿದ್ದು ನೆರೆ ರಾಜ್ಯದಲ್ಲಿ ತಮ್ಮ ಹೊಟ್ಟೆ ಪಾಡಿಗಾಗಿ ತೆರಳಿದ್ದ ವೇಳೆ ಅವರಿಗೆ ಸೂಕ್ತ ರಕ್ಷಣೆ ಇಲ್ಲದೆ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಉಂಟಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಸಾಹಸಮಯ ಜೀವನದೊಂದಿಗೆ ಸಮುದ್ರದಲ್ಲಿ ಕಾರ್ಯ ನಿರ್ವಹಿಸುವ […]