ದಿ. ಆಸ್ಕರ್ ಫರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸ್ಮರಣಾರ್ಥ ವಸತಿ ನಿಲಯಗಳಿಗೆ ಅಗತ್ಯ ವಸ್ತು ವಿತರಣೆ
ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ದಿ. ಆಸ್ಕರ್ ಫರ್ನಾಂಡಿಸ್ ಅವರ 82ನೇ ಹುಟ್ಟು ಹಬ್ಬದ ಸ್ಮರಣಾರ್ಥ ಮಿಷನ್ ಕಾಂಪೌಂಡ್‌ನ ಸಿ.ಎಸ್.ಐ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಏ ಗಫೂರ್ ಮಾತನಾಡಿ, ಆಸ್ಕರ್ ಫರ್ನಾಂಡಿಸ್ ಅವರು ನಡೆದು ಬಂದ ದಾರಿ ಮತ್ತು ಅವರ ಆದರ್ಶಗಳನ್ನು ವಿವರಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ […]
ತಿಂಗಳ ಮೊದಲ ದಿನವೆ ಅಡುಗೆ ಅನಿಲ ಬೆಲೆ ಏರಿಕೆಯ ಉಡುಗೊರೆ ನೀಡಿದ ಸರ್ಕಾರ: ರಮೇಶ್ ಕಾಂಚನ್
ಉಡುಪಿ: ತಿಂಗಳ ಮೊದಲ ದಿನವೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ರೂ.50 ಏರಿಸುವ ಮೂಲಕ ಜನಸಾಮಾನ್ಯರಿಗೆ ಗಿಫ್ಟ್ ನೀಡುವ ಮೂಲಕ ಶಾಕ್ ನೀಡಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನತೆ ಮತ್ತೊಮ್ಮೆ ಮೋದಿ ಸರಕಾರದ ಜನವಿರೋಧಿ ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ. ಸದಾ ಉದ್ಯಮಿಗಳ ಪರ ನಿಲ್ಲುವ ಬಿಜೆಪಿ ಸರಕಾರ ಎಂದಿಗೂ ಕೂಡ ಬಡ ಹಾಗೂ ಮಧ್ಯಮ ವರ್ಗದವರ ಕಷ್ಟಕ್ಕೆ […]
ಮಂಗಳೂರಿನಲ್ಲಿ ರದ್ದಾದ ಕಾವೇರಿ ಆನ್ ಲೈನ್ ಪೈಲಟ್ ಪ್ರಾಜೆಕ್ಟ್ ಉಡುಪಿಗೇತಕ್ಕೆ? ರಮೇಶ್ ಕಾಂಚನ್ ಆರೋಪ
ಉಡುಪಿ: ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ. ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಂತಹ ಪ್ರಯತ್ನ ನಡೆದಾಗ ಜನಸಾಮಾನ್ಯರೊಂದಿಗೆ ವಕೀಲರು, ದಸ್ತಾವೇಜು ಬರಹಗಾರರು […]
ಉಡುಪಿ: ಫೆ. 21 ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಬೂತ್ ಅಧ್ಯಕ್ಷರ ಸಭೆ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 226 ಬೂತ್‌ಗಳಿದ್ದು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಸುಮಾರು 132 ಬೂತ್‌ಗಳಿವೆ. ಈ 132 ಬೂತ್‌ಗಳಿಗೆ ಬೂತ್ ಲೆವೆಲ್ ಏಜೆಂಟ್-2 (B.L.A-2) ಈಗಾಗಲೇ ಆಯ್ಕೆಯಾಗಿದ್ದು 132 ಬೂತ್‌ಗಳ B.L.A-2 ಮತ್ತು ಬೂತ್ ಅಧ್ಯಕ್ಷರ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಫೆ. 21 ರಂದು ಸಂಜೆ 3.00 ಗಂಟೆಗೆ ಕರೆಯಲಾಗಿದೆ. ಈ ಸಭೆಯಲ್ಲಿ ಲೋಕಸಭಾ ಸದಸ್ಯ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ಪ್ರತಾಪನ್ನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, […]
ಬಿಲ್ಲವ-ಮೊಗವೀರ ಸಮಾಜವನ್ನು ಸಂಪೂರ್ಣ ಕಡೆಗಣಿಸಿದ ಬಜೆಟ್: ರಮೇಶ್ ಕಾಂಚನ್ ಆಕ್ರೋಶ
ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರಿಗೆ ಪ್ರತ್ಯೇಕ ನಿಗಮವನ್ನು ಮುಂದಿನ ಬಜೆಟ್ಟಿನಲ್ಲಿ ಘೋಷಣೆ ಮಾಡಿ ಅನುದಾನ ಇಡುವುದಾಗಿ ಹಾಗೂ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಹೇಳಿ ಪ್ರಚಾರ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿಯವರು ತಮ್ಮ ಬಜೆಟ್ಟಿನಲ್ಲಿ ಬಿಲ್ಲವ ಹಾಗೂ ಮೊಗವೀರ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಾವಳಿ ಪ್ರದೇಶದಲ್ಲಿ ಬಿಲ್ಲವ ಸಮುದಾಯ ಹಾಗೂ ಮೊಗವೀರ ಸಮುದಾಯವು ಅತೀ ಹೆಚ್ಚು ಪ್ರಾಬಲ್ಯವನ್ನು ಹೊಂದಿದ್ದು ಬಿಲ್ಲವರಿಗೆ […]