ರಾಸಲೀಲೆ ಸಿಡಿ ಬಹಿರಂಗ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತನ್ನದೆಂದು ಹೇಳಲಾಗುತ್ತಿರುವ ರಾಸಲೀಲೆ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ರಾಜೀನಾಮೆ ನೀಡಿದ್ದಾರೆ. ನನ್ನಿಂದ ಪಕ್ಷ ಹಾಗೂ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಬಾರದು. ಹಾಗೆ ಮುಂಬರುವ ಪಂಚ ರಾಜ್ಯ ಚುನಾವಣೆ ಹಾಗೂ ರಾಜ್ಯ ಉಪಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಬಾರದೆಂಬ ನಿಟ್ಟಿನಿಂದ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಳಿಗ್ಗೆ ಸಿಎಂ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.