ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿಗಳಿಗೆ ಟ್ರಾನ್ಸಿಟ್ ರಿಮಾಂಡ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ (Rameshwaram Cafe Blast) ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ. ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಎನ್‌ಐಎ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ […]

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಮುಖ್ಯ ಸಂಚುಕೋರನ ಬಂಧನ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ. ಮಾರ್ಚ್‌ 1ರಂದು ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ ಎಂದು ಎನ್‌ಐಎ ಮೂಲಗಳು ಹೇಳಿವೆ. 18 ಪ್ರಮುಖ ಸ್ಥಳಗಳ ಮೇಲೆ […]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮತ್ತಿಬ್ಬರನ್ನು ವಶಕ್ಕೆ ಪಡೆದ ಎನ್.ಐ.ಎ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತಿಬ್ಬರನ್ನು ಬಂಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿರುವ ಎನ್‌ಐಎ, ಶೋಧವನ್ನು ಮುಂದುವರೆಸಿದೆ. ಸದ್ಯ ಬಂಧನದಲ್ಲಿರುವ ಇವರಿಬ್ಬರು ನಿಷೇಧಿತ ಅಲ್ ಹಿಂದ್ ಟ್ರಸ್ಟ್ ಜೊತೆ ನಂಟು ಹೊಂದಿದ್ದರು ಎಂದು ತಿಳಿದು ಬಂದಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಹಿಂದಿನ ಕೆಲವು ಸ್ಫೋಟಗಳಿಗೂ ಸಾಮ್ಯತೆ ಇರುವುದರಿಂದ ಈ ಹಿಂದಿನ ಸ್ಫೋಟಗಳಲ್ಲಿ ಭಾಗಿಯಾಗಿರುವ ಹಲವರ ಮೇಲೆ ಎನ್‌ಐ ಕಣ್ಣಿಟ್ಟಿದೆ. ಶಂಕಿತರಿಗೆ […]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದ ಎನ್‌ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಶಂಕಿತರನ್ನು ಬಂಧಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ. ಈ ಇಬ್ಬರು ಶಂಕಿತರು ಶಂಕಿತ ಬಾಂಬರ್‌ನೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಎನ್‌ಐಎ ಅಧಿಕಾರಿಗಳು ಶಂಕಿತರನ್ನು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕರೆದೊಯ್ದಿದ್ದಾರೆ. ಆದರೆ, ಈ ಬಗ್ಗೆ ಎನ್‌ಐಎ ಇನ್ನಷ್ಟೇ ಹೇಳಿಕೆ ನೀಡಬೇಕಿದೆ. ತನಿಖಾ ಸಂಸ್ಥೆಗಳು, ಎನ್‌ಐಎ ಮತ್ತು ರಾಜ್ಯ ವಿಶೇಷ ವಿಭಾಗದ ಸಿಸಿಬಿ ತಂಡಗಳು ವಿವಿಧ ರಾಜ್ಯಗಳಲ್ಲಿ ವ್ಯಾಪಕ ಶೋಧ […]

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕ್ಯಾಪ್ ನಿಂದ ದೊರೆಯಿತೇ ಆರೋಪಿಯ ಸುಳಿವು?

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಗೆ (NIA) ಸ್ಫೋಟಕ ಮಾಹಿತಿ ದೊರೆತಿದ್ದು, ಆರೋಪಿಗೂ ಚೆನ್ನೈಗೂ ಸಂಬಂಧ ಇದೆ ಎನ್ನಲಾಗಿದೆ. ಸ್ಫೋಟದಿಂದ ಕೆಲ ದೂರದಲ್ಲಿ ಶಂಕಿತ ಆರೋಪಿ ತನ್ನ ಕ್ಯಾಪ್ ಬಿಟ್ಟು ಹೋಗಿದ್ದು, ಪೊಲೀಸರು ಈ ಕ್ಯಾಪ್‌ ಮೂಲವನ್ನು ಬೇಧಿಸಿದ್ದಾರೆ. ಇದನ್ನು ಆತ ಚೆನ್ನೈನ ಮಾಲ್‌ ಒಂದರಲ್ಲಿ ಖರೀದಿ ಮಾಡಿದ್ದ ಎನ್ನುವ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಚೆನ್ನೈನ ಮಾಲ್‌ನಲ್ಲಿ ಶಂಕಿತ ಟೋಪಿ ಖರೀದಿಸುತ್ತಿದ್ದ ವೇಳೆ ಆತನ ಜೊತೆ ಮತ್ತೊಬ್ಬ […]