ಶಿವಪುರದಲ್ಲಿ ನೇಣು ಬಿಗಿದುಕೊಂಡು ವಿವಾಹಿತ ಆತ್ಮಹತ್ಯೆ
ಹೆಬ್ರಿ: ಜೀವನದಲ್ಲಿ ಮನನೊಂದ ವಿವಾಹಿತನೋರ್ವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹಾಡಿಯಲ್ಲಿ ನಡೆದಿದೆ. ಹೆಬ್ರಿ ಶಿವಪುರ ನಿವಾಸಿ ರಂಗನಾಥ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಹಿರಿಯಡ್ಕ ಸೌಹಾರ್ದ ಸೊಸೈಟಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಯಾವುದೋ ವಿಚಾರಕ್ಕೆ ಸಂಬಂಧಿಸಿ ಮನನೊಂದಿದ್ದು, ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೇ ವಿಚಾರದಲ್ಲಿ ಮನನೊಂದು ಶಿವಪುರ ಗ್ರಾಮದ ಮೇಲ್ಮುಕ್ಕಾಣಿ ಹಾಡಿಯಲ್ಲಿರುವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]