ಸೆ. 24ರಿಂದ 26: ಉಡುಪಿಯಲ್ಲಿ ‘ರಂಗತೇರು’ ನಾಟಕೋತ್ಸವ

ಉಡುಪಿ: ರಂಗಭೂಮಿ ಉಡುಪಿ ಹಾಗೂ ರಂಗಾಯಣ ಶಿವಮೊಗ್ಗದ ಸಂಯುಕ್ತ ಆಶ್ರಯದಲ್ಲಿ ‘ರಂಗತೇರು’ ನಾಟಕೋತ್ಸವ ಸೆ. 24ರಿಂದ 26ರ ವರೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು. ಸೆ. 24ರಂದು ಸಂಜೆ 6ಗಂಟೆಗೆ ಉದಯಕುಮಾರ್‌ ಶೆಟ್ಟಿ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಕೆ.ಉದಯಕುಮಾರ್‌ ಶೆಟ್ಟಿ, ನಾಟಕೋತ್ಸವಕ್ಕೆ ಚಾಲನೆ ನೀಡುವರು. ಹಿರಿಯ ಸಂಗೀತ ವಿದ್ವಾಂಸ ಟಿ. ರಂಗ ಪೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ […]