ರಂಗಾಯಣ ನಾಟಕಗಳಿಗೆ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನ
ಉಡುಪಿ: ಮೈಸೂರಿನ ರಂಗಾಯಣ ಸಂಸ್ಥೆಯ ವತಿಯಿಂದ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಾಟಕ ಶಾಲೆಯ ಪದವಿ ಪಡೆದಿರುವ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಲ್ಲಿ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪಡೆದಿರುವ 22 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ. ಜುಲೈ 20 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ಮಂಗಳೂರಿನಲ್ಲಿ ಪರ್ವ ಕಾದಂಬರಿಯ ರಂಗ ಪ್ರಸ್ತುತಿ
ಮಂಗಳೂರು: ರಂಗಾಯಣ, ಮೈಸೂರು ಅರ್ಪಿಸುವ ಡಾ. ಎಸ್. ಎಲ್. ಬೈರಪ್ಪನವರ ಪರ್ವ ಕಾದಂಬರಿಯ ರಂಗ ಪ್ರಸ್ತುತಿ. ಮೇ 10, ಮಂಗಳವಾರದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ನಡೆಯಲಿದೆ. ನಿರ್ದೇಶನ: ಪ್ರಕಾಶ್ ಬೆಳವಾಡಿ. ಟಿಕೇಟುಗಳಿಗಾಗಿ ಸಂಪರ್ಕಿಸಿ: www.rangayana.org ನವಕರ್ನಾಟಕ ಪುಸ್ತಕ ಮಳಿಗೆ, ಬಲ್ಮಠ, ಜ್ಯೋತಿ ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ ದೂರವಾಣಿ: 99024 50686