ದ.ಕ. ಜಿಲ್ಲೆಯಲ್ಲಿ ದಲಿತ ವಿದ್ಯಾರ್ಥಿಗಳ ಸರಣಿ  ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಉಡುಪಿ: ಇತ್ತೀಚೆಗೆ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಉಡುಪಿ ಅಂಬೇಡ್ಕರ್‌ ಯುವಸೇನೆ ವತಿಯಿಂದ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಯಿತು. ದಲಿತ ಮುಖಂಡ ಜಯನ್‌ ಮಲ್ಪೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಬುದ್ಧಿವಂತರ ಜಿಲ್ಲೆಯೆಂದು ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಒಂದೇ ತಿಂಗಳಲ್ಲಿ ಮೂರು ದಲಿತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ […]

ಶಾಲಾ ಬಾಲಕಿ‌ ಮೇಲೆ‌ ಅತ್ಯಾಚಾರ: ಪುತ್ತೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಪುತ್ತೂರನ್ನು ಬೆಚ್ಚಿಬೀಳುವಂತೆ ಮಾಡಿದೆ. ಪುತ್ತೂರಿನ ಪಾಪೆಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಸ್ಥಳೀಯ ನಿವಾಸಿ ವಿವಾಹಿತ ಅಜಿತ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿ‌ಯನ್ನು ಚಿಕಿತ್ಸೆಗಾಗಿ‌ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಆಸ್ಪತ್ರೆಗೆ ದಾಖಲಾಗಿದ್ದ […]

ಮಂಗಳೂರು: ಪುತ್ತೂರಿನಲ್ಲಿ ನಡೆಯಿತೇ ಗ್ಯಾಂಗ್ ರೇಪ್..?

ಮಂಗಳೂರು: ಯುವತಿಗೆ ಗಾಂಜಾ ನೀಡಿ ಸಾಮೂಹಿಕ ಅತ್ಯಾಚಾರ‌ ಎಸಗಿರುವ ವಿಡಿಯೋ ತುಣುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ ಎನ್ನಲಾಗಿದೆ. ವೀಡಿಯೋ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು‌ ಕೂಡಲೇ ತನಿಖೆಗೆ ಆದೇಶಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಅತ್ಯಾಚಾರ ನಡೆಸಿದ್ದಾರೆ. ಬಳಿಕ ವಿಡೀಯೋ ವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ತನಿಖೆಗೆ‌ ಆದೇಶಿಸಿದ್ದಾರೆ.

ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಅರುಣ್ ಆಚಾರಿ ದೋಷಿ

ಉಡುಪಿ: ಕಳೆದ ಮೂರು ವರ್ಷಗಳ ಹಿಂದೆ ಮಣಿಪಾಲದ ಪೆರಂಪಳ್ಳಿ ಎಂಬಲ್ಲಿ ನಡೆದ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಆರೋಪಿ ಪೆರಂಪಳ್ಳಿ ನಿವಾಸಿ ಅರುಣ್‌ ಆಚಾರಿ(32) ಎಂಬಾತನನ್ನು ದೋಷಿ ಎಂದು ಬುಧವಾರ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್‌ 12ರಂದು ಪ್ರಕಟಿಸಲಿದೆ. ಆರೋಪಿ ಅರುಣ್ 2016ರ ಜುಲೈ 16ರಂದು ಬೆಳಿಗ್ಗೆ 9ಗಂಟೆ ಸುಮಾರಿಗೆ ಬಾಲಕಿ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಆಕೆಗೆ ಮದುವೆಯಾಗುತ್ತೇನೆಂದು ಆಸೆ ತೋರಿಸಿ ತನ್ನ ಬೈಕಿನಲ್ಲಿ ಕೂರಿಸಿಕೊಂಡು ಮಣಿಪಾಲದ ಎರಡು […]

ಮಣಿಪಾಲ: ಯುವತಿ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಉಡುಪಿ: ಯುವತಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಾರಣಕಟ್ಟೆ ನಿವಾಸಿ ಜಗದೀಶ್ (24), ಪೆರ್ಡೂರು ನಿವಾಸಿ ಗಣೇಶ್ (26)  ಗುರುತಿಸಲಾಗಿದೆ. ಇವರು ಮಾ.17 ರಂದು ಯುವತಿಯನ್ನು ಮಣಿಪಾಲ ಲಾಡ್ಜ್ ಒಂದಕ್ಕೆ ಕರೆದೊಯ್ದ ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಯುವತಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಅಸ್ವಸ್ಥಗೊಂಡಿದ್ದ ಯುವತಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಆಸ್ಪತ್ರೆಯವರು ನೀಡಿದ ಮಾಹಿತಿಯಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಗೆ ನಡೆಸಿದ ಪೊಲೀಸರು ಮಾ.24 ರಂದು […]