ಅಪರೂಪದ ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಉಡುಪಿ: ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದರು. ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ […]