ಪ್ರವಾಹ ನಿರ್ವಹಣೆ ಉಡುಪಿ ಜಿಲ್ಲೆಗೆ 5 ಕೋಟಿ ಬಿಡುಗಡೆ: ಪಡುಬಿದ್ರಿಯಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ: ಸಚಿವ ಆರ್. ಅಶೋಕ್

ಪಡುಬಿದ್ರಿ: ಇಲ್ಲಿನ ಕಡಲ ತೀರದಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಕಡಲ್ಕೊರತೆ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಲು ನೀಲಾನಕ್ಷೆ ಸಿದ್ಧಪಡಿಸಿ ಕಳುಹಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಅವರು ನೀಲಾನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಕೊಟ್ಟ ಕೂಡಲೇ ಹಣ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಕಾಪು ತಾಲ್ಲೂಕಿನ ಪಡುಬಿದ್ರಿ ಕಡಲ ತೀರದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ. ಕೇಂದ್ರ ಸರ್ಕಾರದ ಎನ್ ಡಿಆರ್ ಎಫ್ ನಿಧಿಯಲ್ಲಿ […]