ಎಪಿಎಲ್ ಕಾರ್ಡ್ ವಿತರಣೆಗೆ ಚಾಲನೆ ನೀಡಲು ಆಹಾರ ಇಲಾಖೆ ನಿರ್ಧಾರ: ಜೂನ್ ನಿಂದ ಅರ್ಜಿ ಸಲ್ಲಿಕೆಗೆ ಅವಕಾಶ?
ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಯ ವೆಬ್ ಪೋರ್ಟಲ್ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ಸ್ಥಗಿತಗೊಳಿಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜೂನ್ ಮೊದಲ ವಾರದಲ್ಲಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗುವುದು […]