ನ.1ರಿಂದ ಮನೆ ಬಾಗಿಲಿಗೆ ಪಡಿತರ..!!

ಬೆಂಗಳೂರು: ಆಂಧ್ರಪ್ರದೇಶದ ಮಾದರಿಯಲ್ಲಿ ಪಡಿತರ ಚೀಟಿದಾರರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ. ನವೆಂಬರ್‌ 1ರಂದು ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಪ್ರತಿ ನ್ಯಾಯಬೆಲೆ ಅಂಗಡಿ ಜತೆಗೆ ಒಂದು ವಾಹನವನ್ನು ಜೋಡಣೆ ಮಾಡುವ ಪ್ರಸ್ತಾವವಿದೆ. ಇದಕ್ಕಾಗಿ 700 ವಾಹನಗಳ ಅಗತ್ಯವಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ […]