ಭೂಗತ ಪಾತಕಿ ರವಿ ಪೂಜಾರಿಗಿತ್ತು ಮಲ್ಪೆಯ ನಂಟು, ರವಿ ಪೂಜಾರಿ ವಿರುದ್ಧ ಉಡುಪಿ ಸೇರಿದಂತೆ ಜಿಲ್ಲೆಯ ವಿವಿಧೆಡೆ 10 ಪ್ರಕರಣ ದಾಖಲು

ಉಡುಪಿ: ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಬಂಧಿತನಾಗಿರುವ ಮೋಸ್ಟ್ ವಾಟೆಂಡ್ ಭೂಗತ ಪಾತಕಿ ರವಿ ಪೂಜಾರಿ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ರವಿ ಪೂಜಾರಿಯ ಮೇಲೆ ಹಫ್ತಾ ವಸೂಲಿ, ಬೆದರಿಕೆ ಸೇರಿದಂತೆ 10 ಪ್ರಕರಣಗಳು ದಾಖಲಾಗಿವೆ. 2006ರಲ್ಲಿ ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರಿಕೆ ಹಣಕ್ಕಾಗಿ ಬೆದರಿಕೆಯೊಡ್ಡಿದ ಪ್ರಕರಣ ದಾಖಲಾದರೆ, ಕಾರ್ಕಳ, ಉಡುಪಿ, ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಹಫ್ತಾ ವಸೂಲಿ, ಬೆದರಿಕೆ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಲ್ಪೆಯಲ್ಲಿತ್ತು […]