RBI ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ.

1990ರ ಬ್ಯಾಚ್ ನ ಐಎಎಸ್ ಅಧಿಕಾರಿ ಸಂಜಯ್ ಮಲ್ಹೋತ್ರಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮುಂದಿನ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿಸೆಂಬರ್ 10 ರಂದು ಕೊನೆಗೊಳ್ಳಲಿದೆ. ದಾಸ್ ಅವರು 2018 ರ ಡಿಸೆಂಬರ್ ನಲ್ಲಿ ಊರ್ಜಿತ್ ಪಟೇಲ್ ಅವರಿಂದ ಅಧಿಕಾರ ವಹಿಸಿಕೊಂಡಿದ್ದರು.ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಹೋತ್ರಾ ಹಣಕಾಸು, ತೆರಿಗೆ, ವಿದ್ಯುತ್, ಮಾಹಿತಿ ತಂತ್ರಜ್ಞಾನ ಮತ್ತು ಗಣಿಗಾರಿಕೆಯಲ್ಲಿ 33 ವರ್ಷಗಳ ವೈವಿಧ್ಯಮಯ ಅನುಭವವನ್ನು […]