ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನಿಲ್ಲ

ಬೆಂಗಳೂರು: ಖ್ಯಾತ ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರು ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಮೇ 4ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು, ಸುದೀರ್ಘ ಚಿಕಿತ್ಸೆಗೆ ಒಳಗಾಗಿದ್ದರು. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಸಿದ್ದಲಿಂಗಯ್ಯನವರು ಮೂಲತಃ ಮಾಗಡಿ ತಾಲೂಕಿನ ಮಂಚನಬೆಲೆ ಜಿಲ್ಲೆಯವರು. ಸಿದ್ದಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕವಿತೆಗಳನ್ನು ರಚಿಸಿದ್ದಾರೆ. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.