ಧಾರಾಕಾರ ಮಳೆಗೆ ತತ್ತರಿಸಿದ ಉತ್ತರ: ಹಿಮಾಚಲದಲ್ಲಿ ಕೊಚ್ಚಿ ಹೋದ ಕಾರುಗಳು; ದೆಹಲಿಯಲ್ಲಿಯೂ ವರುಣನ ಅಬ್ಬರ

ನವದೆಹಲಿ: ಭಾರೀ ಮಳೆಯಿಂದಾಗಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿದ್ದು, ಕಳೆದ ಮೂರು ದಿನಗಳಲ್ಲಿ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚು ಹಾನಿಗೊಳಗಾದ ಹಿಮಾಚಲ ಪ್ರದೇಶದಲ್ಲಿ, ರೆಡ್ ಅಲರ್ಟ್ ಘೋಷಿಸಲಾಗಿದೆ ಮತ್ತು ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು ಎರಡು ದಿನಗಳ ಕಾಲ ಮುಚ್ಚಲ್ಪಟ್ಟಿವೆ. ಎಲ್ಲಾ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ಜನಜೀವನ ಸ್ಥಗಿತಗೊಂಡಿದೆ. Fierce Parvati River at Manikaran !Stay away from rives and streams 🌧️#Heavyrainfall pic.twitter.com/2IcfCbpxoZ […]

ಜಿಲ್ಲೆಯಲ್ಲಿ ರೆಡ್ ಅಲರ್ಟ್;  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಹೆಗಲಿಗೆ: ಜಿಲ್ಲಾಧಿಕಾರಿ ಕೂರ್ಮ ರಾವ್

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಆದರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವೆನಿಸಿದ ಶಿಕ್ಷಣ ಸಂಸ್ಥೆಗಳಿಗೆ (ವಿಪತ್ತು […]

ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 11 ರಂದು ಶಾಲೆಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್: ಜುಲೈ 8-9 ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅತ್ಯಾಧಿಕ ಮಳೆಯಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಅಂಗನವಾಡಿ ಕೇಂದ್ರ, ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ- 8 ಮತ್ತು 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗೆ ಟೋಲ್ ಫ್ರೀ ನಂಬರ್ 1077 ಅಥವಾ 080-2574802 […]

ಉಡುಪಿ, ದ.ಕ ಮತ್ತು ಉ.ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ: ತ್ರಿವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ/ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದ.ಕ ಮತ್ತು ಉ.ಕನ್ನಡದಲ್ಲಿ ಅತ್ಯಾಧಿಕ ಮಳೆ ಬೀಳುವ ಸಂಭವವಿರುವ ನಿಟ್ಟಿನಲ್ಲಿ ತ್ರಿವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ 115.6 ಮೀ.ಮೀ ನಿಂದ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗಿನ ವ್ಯಾಪ್ತಿಯಲ್ಲಿ 3.5 – 4.8 ಮೀಟರ್‌ ಎತ್ತರದ ಅಲೆಗಳನ್ನು ಊಹಿಸಲಾಗಿದೆ. ಪ್ರಸ್ತುತ ವೇಗವು 50 […]