ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಥೆರಪಿಸ್ಟ್-1 ಹುದ್ದೆಗೆ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಪದವಿ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ […]

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಗ್ನಿ ಅವಘಡ ತಡೆಯುವಿಕೆ ಕಾರ್ಯಾಗಾರ

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಅಗ್ನಿ ಶಾಮಕದಳ ಉಡುಪಿ ಇದರ ಸಹಯೋಗದೊಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆಯನ್ನು ಶನಿವಾರದಂದು ಹಮ್ಮಿಕೊಳ್ಳಲಾಯಿತು. ಅಗ್ನಿ ಶಾಮಕ ದಳದ ಅಧಿಕಾರಿಗಳಾದ ಸತೀಶ್ ಎನ್. ಮತ್ತು ತಂಡವು ಬೆಂಕಿ ಅವಘಡದ ಕಾರಣಗಳು ಹಾಗೂ ಬೆಂಕಿ ಅವಘಡಗಳನ್ನು ತಡೆಯುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ, ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಗುರುಪ್ರಸಾದ್ ರಾವ್, ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೋ. […]

ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾ ಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ […]

ತ್ರಿಶಾ ವಿದ್ಯಾ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ತ್ರಿಶಾ ವಿದ್ಯಾ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ರಕ್ತದಾನ ಎನ್ನುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದ್ದು, ಇಂತಹ ಶಿಬಿರಗಳು ಜನರಲ್ಲಿ ಮಾನವೀಯತೆಯನ್ನು ವೃದ್ಧಿಗೊಳಿಸುತ್ತವೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಎಸ್.ಜಯಕರ […]

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪೋಷಕ ಸದಸ್ಯತ್ವ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದಲ್ಲಿ ಪ್ರಸಕ್ತ ಸಾಲಿಗೆ ಮಣಿಪಾಲದ ಹೆಚ್.ಪಿ.ಆರ್ ಕಾಲೇಜು ಆಫ್ ಪ್ಯಾರಾಮೆಡಿಕಲ್ ಸೈನ್ಸ್ ನ ಮ್ಯಾನೇಜಿಂಗ್ ಡೈರಕ್ಟರ್ ಹಾಗೂ ಪ್ರಾಂಶುಪಾಲ ಹರಿಪ್ರಸಾದ್ ರೈ ಅವರು, ಪೋಷಕ ಸದಸ್ಯತ್ವವನ್ನು ನೋಂದಾಯಿಸಿದ್ದು, ಇತ್ತೀಚೆಗೆ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷರಾದ ಕೂರ್ಮಾರಾವ್ ಎಂ. ಅವರು ಹರಿಪ್ರಸಾದ್ ರೈ ಅವರನ್ನು ಪುಷ್ಪ ನೀಡುವ ಮೂಲಕ ಸಂಸ್ಥೆಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ರಾಜ್ಯ […]