ಜಿಲ್ಲೆಯಲ್ಲಿ 4,253 ಯುವ ಮತದಾರರ ನೋಂದಣಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಜಿಲ್ಲೆಯಲ್ಲಿ ಈ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 4,253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್‌ನಲ್ಲಿ, ಭಾರತೀಯ ಚುನಾವಣಾ ಆಯೋಗವು 1-1-2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಸಿದ್ಧಪಡಿಸಿರುವ ಭಾವಚಿತ್ರವುಳ್ಳ  ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ, ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು  ಹಸ್ತಾಂತರಿಸಿ ಮಾತನಾಡಿದರು. ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 4,87,676 ಪುರುಷರು, 5,25,155 ಮಹಿಳಾ ಮತದಾರರು, ಇತರೆ […]