ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿಯನ್ನು ಬಂಧಿಸಿ ಕರ್ತವ್ಯದಿಂದ ವಜಾ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಆಗ್ರಹ
ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ದ ಮಾತಾಡಿ ಸಂವಿಧಾನವನ್ನು ಮುಖ್ಯಾಧಿಕಾರಿ ನಿಂದನೆ ಮಾಡಿದ್ದಾರೆ, ತಮಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಕಾರ್ಕಳದ ದಲಿತ ಉಪನ್ಯಾಸಕಿ ಸವಿತಾಕುಮಾರಿ ಪೊಲೀಸ್ ಠಾಣೆಗೆ ದೂರು ನೀಡಿ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೀಘ್ರವೇ ಮುಖ್ಯಾಧಿಕಾರಿ ರೇಖಾ ಶೆಟ್ಟಿಯನ್ನು ಕೂಡಲೇ ಬಂದಿಸಬೇಕು, ತಪ್ಪಿದಲ್ಲಿ ಇದರ ವಿರುದ್ದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಇದರ ರಾಜ್ಯ ಸಂಚಾಲಕರಾದ ಉದಯ್ ಕುಮಾರ್ ತಲ್ಲೂರ್ ತಿಳಿಸಿದ್ದಾರೆ. ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರಿಗೆ ಸರಕಾರವು […]