ವಿದೇಶಿ ಪ್ರಯಾಣಿಕರ ಕ್ವಾರಂಟೈನ್ ನಿಯಮದಲ್ಲಿ ಸಡಿಲಿಕೆ

ನವದೆಹಲಿ: ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ. ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ. ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು: ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಇಂಥವರು ಏಳು ದಿನ […]