ನೈಟ್ ಕರ್ಪ್ಯೂ ಮಾರ್ಗಸೂಚಿ ಬಿಡುಗಡೆ: ಯಾವುದಕ್ಕೆಲ್ಲ ಅವಕಾಶ?, ಯಾವುದಕ್ಕಿಲ್ಲ?

ಬೆಂಗಳೂರು: ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಎರಡನೆ ಅಲೆ ತಡೆಗೆ ಶನಿವಾರದಿಂದ (ಏ.10ರಿಂದ 20ರ ವರೆಗೆ) ಉಡುಪಿ, ಮಣಿಪಾಲ, ಮಂಗಳೂರು, ಬೆಂಗಳೂರು ಸಹಿತ ರಾಜ್ಯದ 8 ನಗರಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕೊರೊನಾ ಕರ್ಫ್ಯೂ (ರಾತ್ರಿ ಕರ್ಪ್ಯೂ) ಹೇರಲಾಗುತ್ತಿದ್ದು, ಈ ಅವಧಿಯಲ್ಲಿ ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಯನ್ನು ರಾಜ್ಯ ಸರ್ಕಾರ ನಿರ್ಬಂಧಿಸಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ. […]