ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇಗುಲದ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಪ್ರಿಲ್ 8 ರಿಂದ 11ರ ವರೆಗೆ ನಡೆಯಲಿರುವ ನವೀಕೃತ ನಾಗದೇವರ ಗುಡಿ ಸಮರ್ಪಣೆ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು. ಬಳಿಕ ಶ್ರೀಗಳು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಪಾತ್ರಿಗಳಾದ ಶ್ರೀ ಗೋಪಾಲಕೃಷ್ಣ ಸಾಮಗ, ಅನಂತ ಸಾಮಗ, ಪಾಡಿಗಾರು ಶ್ರೀನಿವಾಸ ತಂತ್ರಿ, ಕಲ್ಲಂಜೆ ವಿಠಲ ಭಟ್, […]