ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರಕ್ಕೆ ಸ್ಥಳಾಂತರ.!
ಉಡುಪಿ: ಪ್ರಸ್ತುತ ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ ₹ 115 ಕೋಟಿ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದೆ. ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಬಗ್ಗೆ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ ಅಥವಾ ಮಾರ್ಚ್ […]