ಉಚ್ಛ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜ್ಯಾದ್ಯಂತ ವಿವಾದ ಸೃಷ್ಠಿಸಿದ್ದ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ ವಸ್ತ್ರ ಸಂಹಿತೆಯ ಆದೇಶವನ್ನು ಎತ್ತಿಹಿಡಿದ ಉಚ್ಛ ನ್ಯಾಯಾಲಯ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆಯ ಪರವಾಗಿ ನೀಡಿರುವ ತೀರ್ಪು ಸಂವಿಧಾನಕ್ಕೆ ದೊರೆತ ಜಯವಾಗಿದೆ ಎಂದು ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.