ಖ್ಯಾತ ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ಇನ್ನಿಲ್ಲ
ಮುಂಬೈ: ಖ್ಯಾತ ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ಕಿಡ್ನಿ ವೈಫಲ್ಯದಿಂದ ನಿಧನ ಹೊಂದಿದ್ದಾರೆ. ಲೀನಾ ಕಳೆದ ಒಂದೂವರೆ ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ತಾಯಿ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದರು. ಆದರೂ ಆಕೆ ಬದುಕಲಿಲ್ಲ ಎಂದು ಸಹನಟ ವರ್ಷಿಪ್ ಖನ್ನಾ ತಿಳಿಸಿದ್ದಾರೆ. ಅವರು ಶೇಠ್ ಜೀ, ಆಪ್ ಕೇ ಆ ಜಾನೇ ಸೇ, ಮೇರಿ ಹಾನಿಕಾಕರ್ ಬೀವೀ ಹಾಗೂ ಕ್ಲಾಸ್ ಆಫ್ 2020 ಮುಂತಾದ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದರು. ಅಲ್ಲದೆ, ಬಾಲಿವುಡ್‌ನ ಹಿಚ್ಕಿ ಸಿನಿಮಾದಲ್ಲೂ […]