ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ: 2023-24 ಆರ್ಥಿಕ ವರ್ಷಕ್ಕೆ ಜಿಡಿಪಿ 6.5 ಶೇಕಡಾ; 5.4 ಶೇ. ಹಣದುಬ್ಬರ
ನವದೆಹಲಿ: ಆರ್‌ಬಿಐನ ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು 6.5 ಪ್ರತಿಶತದಲ್ಲಿ ಯಥಾಸ್ಥಿತಿಯಲ್ಲಿಡಲು ಸರ್ವಾನುಮತದಿಂದ ನಿರ್ಧರಿಸಿದೆ. ಕೇಂದ್ರ ಬ್ಯಾಂಕ್ ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿರಿಸಿರುವುದು ಇದು ಸತತ ನಾಲ್ಕನೇ ಬಾರಿಯಾಗಿದೆ. ಆರ್ಥಿಕ ವರ್ಷ 24ರ ಜಿಡಿಪಿ ಅಂದಾಜು 6.5 ಶೇಕಡಾದಲ್ಲಿ ಉಳಿಸಿಕೊಂಡಿರುವ ಆರ್.ಬಿ.ಐ 2023-24 ಕ್ಕೆ ಹಣದುಬ್ಬರ ಪ್ರಕ್ಷೇಪಣವನ್ನು 5.4 ಶೇಕಡಾದಲ್ಲಿ ಬದಲಾಯಿಸದೆ ಇರಿಸಿದೆ. ಶುಕ್ರವಾರ ಆರ್ಥಿಕ ವರ್ಷ 24 ರ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಸ್ತುತಪಡಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, “ನಮ್ಮ ವಿತ್ತೀಯ ನೀತಿಯು […]
ಈ ಬಾರಿಯೂ ರೆಪೋದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್.ಬಿ.ಐ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಗುರುವಾರದಂದು ತನ್ನ ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು, ರೆಪೊ ದರವನ್ನು ಕಳೆದ ಬಾರಿಯ ಶೇಕಡಾ 6.5ರಷ್ಟು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ಮುಂಬೈನ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು. ಹಣದುಬ್ಬರವನ್ನು ತಗ್ಗಿಸುವ ನಿಟ್ಟಿನಲ್ಲಿ ರೆಪೋದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲಾಗಿದೆ. ಸ್ಥಿರತೆಯನ್ನು ಮೊದಲ ಆದ್ಯತೆಯಾಗಿರಿಸಿಕೊಂಡು ಆರ್ ಬಿ ಐ ನೀತಿ ರೂಪಿಸಿದೆ. ದೇಶೀಯ ಆರ್ಥಿಕತೆಯ ಮೂಲಭೂತ […]