ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಬ್‌ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಬ್‌ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಂಡ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ರಜೆ ಕಾಲದ ನ್ಯಾಯಪೀಠವು ಜಾಮೀನು‌ ಮಂಜೂರು ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಗಳು ಸಿದ್ಧಾಂತ ಮತ್ತು ಭಿನ್ನಾಭಿಪ್ರಾಯದ ಆಧಾರದ ಮೇಲೆ […]