ಮಲ್ಪೆಯಲ್ಲಿ ನಾಡದೋಣಿ ಮೀನುಗಾರರಿಗೆ ಪ್ರತ್ಯೇಕ ಜಟ್ಟಿ ನಿರ್ಮಾಣಕ್ಕೆ ಮನವಿ: ಶಾಸಕ ರಘುಪತಿ ಭಟ್ ಸ್ಥಳಕ್ಕೆ ಭೇಟಿ ಪರಿಶೀಲನೆ
ನಾಡದೋಣಿ ಮೀನುಗಾರರಿಗೆ ಪ್ರತ್ಯೇಕ ಜಟ್ಟಿ ನಿರ್ಮಿಸಿ ಕೊಡುವಂತೆ ಮಲ್ಪೆ ನಾಡದೋಣಿ ಮೀನುಗಾರರ ಸಂಘದವರು ಶಾಸಕ ಕೆ ರಘುಪತಿ ಭಟ್ ಅವರಿಗೆ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕ ಕೆ. ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಡ ದೋಣಿ ಮೀನುಗಾರರಿಗೆ ಪ್ರತ್ಯೇಕ ಜಟ್ಟಿ ನಿರ್ಮಿಸಿ ಕೊಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.