ಸೆಲೂನ್, ಬ್ಯುಟಿಪಾರ್ಲರ್ ತೆರೆಯಲು ಅನುಮತಿ ನೀಡಿ: ಉಡುಪಿ ಜಿಲ್ಲಾ ಸವಿತಾ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ಲಾಕ್ ಡೌನ್ ನಿಂದ ಮುಚ್ಚಿರುವ ಸೆಲೂನ್ ಹಾಗೂ ಬ್ಯುಟಿಪಾರ್ಲರ್ ಗಳನ್ನು ತೆರೆಯಲು ಅನುಮತಿ ನೀಡುವಂತೆ ಕೋರಿ ಉಡುಪಿ ಜಿಲ್ಲಾ ಸವಿತಾ ಸಮಾಜ ಸಂಘದಿಂದ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಇಂದು ಮನವಿ ನೀಡಲಾಯಿತು. ನಿಯೋಗದಲ್ಲಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಭಂಡಾರಿ ನಿಂಜೂರು, ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಗೌರವ ಅಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಇದ್ದರು.