ಕಾರ್ಕಳ ಕಾಂಗ್ರೆಸ್ ನಲ್ಲಿ ಭುಗಿಲೆಂದ ಅಸಮಾಧಾನ: ಮಾಜಿ ಸಚಿವರ ಎದುರಿನಲ್ಲೇ ಆಕ್ರೋಶ ಹೊರಹಾಕಿದ ಕಾರ್ಯಕರ್ತರು
ಕಾರ್ಕಳ: ತಾಲ್ಲೂಕಿನಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ನಾಯಕರಿಲ್ಲದೆ ಸೊರಗುತ್ತಿರುವ ಕಾರ್ಕಳ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧವೇ ಸ್ಥಳೀಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಹೌದು, ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಇಂದು ಆಯೋಜಿಸಿದ್ದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಕೆಲಸ ನಾಯಕರು ಆಕ್ರೋಶ ಹೊರಹಾಕಿದರು. ಕಾರ್ಯಕ್ರಮದ ಮಧ್ಯೆ ಮಾತನಾಡಿದ ಮಿಯ್ಯಾರು ಗ್ರಾಪಂ ಸದಸ್ಯ ಡೇನಿಯಲ್ ರೇಂಜರ್ ಅವರು, […]