ಕೈ ಗೆ ಬೈ ಬೈ ಎಂದ ಪ್ರಮೋದ್ ಮಧ್ವರಾಜ್: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇ 7 ಶನಿವಾರದಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅಧಿಕೃತವಾಗಿ ರಾಜೀನಾಮೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ”ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಮತ್ತು ಇತ್ತೀಚೆಗೆ ನನಗೆ ನೀಡಲಾದ ಹೊಸ ಹುದ್ದೆಗೆ ನ್ಯಾಯ ಒದಗಿಸಲು ಅಸಾಧ್ಯವಾಗುವ ಹಂತಕ್ಕೆ ತಲುಪಿದ್ದೇನೆ. ಹೀಗಾಗಿ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಸ್ವೀಕರಿಸದಿರಲು ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಕಳೆದ ಮೂರು ವರ್ಷಗಳಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ […]
ದೋಸ್ತಿ ಸರ್ಕಾರದ ಎಲ್ಲಾ ಸಚಿವರ ರಾಜೀನಾಮೆ…!
ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ದಿನೇಶ್ ಗುಂಡೂರಾವ್, ಡಿಕೆಶಿ ಮೊದಲಾದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆದ ಸಭೆ ನಡೆದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಎಲ್ಲಾ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ. ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ 22 ಸಚಿವರು ಹಾಗೂ ಜೆಡಿಎಸ್ ಪಕ್ಷದ 9 ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಮೂಲಕ ದೋಸ್ತಿಗಳು ಸರ್ಕಾರ ಉಳಿಸಿಕೊಳ್ಳಲು ಕೊನೆಯ ಅಸ್ತ್ರ ಪ್ರಯೋಗಿಸಲಾಗಿದೆ. ಸಿಎಂ ಕುಮಾರಸ್ವಾಮಿ ಕೈಗೆ ಸಚಿವರು ರಾಜೀನಾಮೆ ಪತ್ರ ನೀಡಲಿದ್ದು, ಬಳಿಕ […]
ಕಾಂಗ್ರೆಸ್ ರಾಜೀನಾಮೆಗೆ ಮುಂದಾದ ಮತ್ತೋರ್ವ ಶಾಸಕಿ..?
ಖಾನಾಪುರ ಜು.08: ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭೆ ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳಕರ ಅವರೂ ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ತಾಲೂಕಿನ ಶಾಸಕರ ಆಪ್ತ ವಲಯದಲ್ಲಿ ಹರಡಿದೆ. ಭಾನುವಾರ ಖಾನಾಪುರ ತಾಲೂಕಿನ ಕೆಲ ಕಾಂಗ್ರೆಸ್ ಮುಖಂಡರು ಪಟ್ಟಣದಲ್ಲಿ ಸಭೆಯನ್ನು ನಡೆಸಿ ಶಾಸಕರ ನಡೆಯ ಬಗ್ಗೆ ಚರ್ಚಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ಮುಂಜಾನೆ ಕರೆದಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಶಾಸಕರು ಮುಂದೂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯುವ […]