ಉಸಿರಾಟದ ಸಮಸ್ಯೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲು

ನವದೆಹಲಿ: ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರಿಂದ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆ. 31ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣದಿಂದ ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.