ರೈತರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಎನ್ ಡಿಎಯಿಂದ ಹೊರಬರುತ್ತೇವೆ: ಬಿಜೆಪಿಗೆ ಮಿತ್ರಪಕ್ಷದ ಎಚ್ಚರಿಕೆ
ಜೈಪುರ: ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಸ್ಥಾನದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬಿಜೆಪಿ ಮಿತ್ರ ಪಕ್ಷ ಲೋಕತಾಂತ್ರಿಕ್ ಪಕ್ಷದ (ಆರ್‌ಎಲ್‌ಪಿ) ಬೆಂಬಲ ನೀಡಿದೆ. ಆರ್‌ಎಲ್‌ಪಿ ಸಂಸದ ಹನುಮಾನ್ ಬೆನಿವಾಲ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ. ಮಾತುಕತೆಯಲ್ಲಿ ರೈತರ ಪರವಾದ ನಿರ್ಧಾರಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಎನ್‌ಡಿಎಯಿಂದ ಹೊರ ಹೋಗುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಸ್ಥಾನ-ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬೆನಿವಾಲ್ ಮತ್ತು ಅವರ ಬೆಂಬಲ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ […]