ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಪರ್ಮಕವಾಗಿ ಜಾರಿಯಾಗಲಿ
ಉಡುಪಿ: ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿ ಸೋಜಾ ಹೇಳಿದರು. ಅವರು ಶನಿವಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ನಿವೃತ್ತ […]